ನವದೆಹಲಿ: ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸಹ ಭಾಗಿಯಾಗಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದಿನ ಸಭೆಯಲ್ಲಿ ಪ್ರಧಾನಿ ಮೋದಿ ಸಿಎಂಗಳಿಗೆ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಹಲಸು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.














