ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಇಬ್ಬರು ಹಿರಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಯ ಮಾಜಿ ವಿದ್ಯಾರ್ಥಿಯೂ ಸೇರಿ ಮೂವರನ್ನು ಗುರುವಾರ ರಾತ್ರಿ ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.
ಜೂನ್ 25ರಂದು ಈ ಘಟನೆ ನಡೆದಿದೆ. ಕಾಲೇಜಿಗೆ ಹೋದ ಯುವತಿಯನ್ನು ಶಿಕ್ಷಣ ಸಂಸ್ಥೆಯ ಕೊಠಡಿಯಲ್ಲಿಯೇ ಮೂವರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ಕಸ್ಬಾ ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಆರಂಭಿಕ ಹಂತದ ತನಿಖೆಯಲ್ಲಿದೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದರು.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದರು.















