ನವದೆಹಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಇಂದು ಮತ್ತು ನಾಳೆ ಭಾರತ ಬಂದ್ ಗೆ ಕರೆ ನೀಡಿದೆ.
ಈ ಮುಷ್ಕರದಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಭಾಗವಹಿಸುತ್ತಿದೆ. ಮುಷ್ಕರದಿಂದ ಬ್ಯಾಂಕ್ ನಲ್ಲಿ ಕೆಲಸವು
ಸೀಮಿತ ಪ್ರಮಾಣದಲ್ಲಿರಲಿದ್ದು, ಗ್ರಾಹಕರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಉಳಿದಂತೆ ಮುಷ್ಕರದ ನಡುವೆ ಎಂದಿನಂತೆ ಕಚೇರಿ ಕೆಲಸಗಳು ನಡೆಯಲಿದೆ ಎನ್ನಲಾಗಿದೆ.
ರೈಲ್ವೇ ಮತ್ತು ರಕ್ಷಣಾ ವಲಯದ ಒಕ್ಕೂಟಗಳು ಕೂಡ ಮುಷ್ಕರವನ್ನು ಬೆಂಬಲಿಸಿವೆ.














