Coastal Bulletin

ಲಕ್ನೋ: 2006 ರ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಪ್ರಯಾಗ್‌ರಾಜ್‌ನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿ ಗ್ಯಾಂಗ್‌ಸ್ಟರ್ ಸಮಾಜವಾದಿ ಪಕ್ಷದ ಮಾಜಿ ಸಂಸದ ಮತ್ತು ಪಾತಕಿ ಅತೀಕ್ ಅಹ್ಮದ್,ಖಾನ್ ಸೌಲತ್ ಹನೀಫ್ ಹಾಗೂ ದಿನೇಶ್ ಪಾಸಿ ರವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 1 ಲಕ್ಷ ದಂಡ ವಿಧಿಸಿದೆ.

ಕೊಲೆ ಮತ್ತು ಅಪಹರಣ ಸೇರಿದಂತೆ 100 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಮತ್ತು ಶಾಸಕ ಅಹ್ಮದ್ ಅವರನ್ನು ಸೋಮವಾರ ಉತ್ತರ ಪ್ರದೇಶ ಪೊಲೀಸರು ಗುಜರಾತ್ ಜೈಲಿನಿಂದ ಪ್ರಯಾಗ್‌ರಾಜ್‌ಗೆ

ಕರೆತಂದರು.

ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ (2005) ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಹತ್ಯೆಯ ಒಂದು ತಿಂಗಳ ನಂತರ ಅಹ್ಮದ್ ಅವರಿಗೆ ಶಿಕ್ಷೆಯಾಗಿದೆ.

Leave a Comment