Coastal Bulletin

ಒಡಿಶಾ: ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ನಿಧನರಾಗಿದ್ದಾರೆ.

ಭುವನೇಶ್ವರ ಅಪೋಲೋ ಆಸ್ಪತ್ರೆಯಲ್ಲಿ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್  ಕೊನೆಯುಸಿರೆಳೆದಿದ್ದಾರೆ.

ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ ನ ಗಾಂಧಿ ಚೌಕದಲ್ಲಿ ಮಧ್ಯಾಹ್ನ ಗುಂಡಿನ ದಾಳಿ ನಡೆಸಲಾಗಿತ್ತು. ಆ ವೇಳೆ

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಮವಸ್ತ್ರದಲ್ಲಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ್ ಎಂಬವರು ಗುಂಡಿನ ದಾಳಿ ನಡೆಸಿದ್ದಾರೆ,ದಾಳಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

Leave a Comment