Coastal Bulletin

ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್ ಸಾವನ್ನಪ್ಪಿದ 9 ತಿಂಗಳ ಬಳಿಕ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನ ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥ (CDS)ರಾಗಿ ನೇಮಕ ಮಾಡಿದೆ.

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ 2021ರ ಮೇ ತಿಂಗಳಲ್ಲಿ ಪೂರ್ವ ಕಮಾಂಡ್ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. 

ತಮಿಳುನಾಡಿನ  ಕುನ್ನೂರು ಬಳಿ ವಾಯುಸೇನೆಯ ಎಂಐ17ವಿ5 ಹೆಲಿಕಾಪ್ಟರ್ ಪತನವಾಗಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಾವನ್ನಪ್ಪಿದರು. ಇದರೊಂದಿಗೆ ದುರಂತದಲ್ಲಿ 13 ಜನ ಸಾವನ್ನಪ್ಪಿದ್ದು, ಇದರಲ್ಲಿ ಬಿಪಿನ್ ರಾವತ್

ಅವರ ಪತ್ನಿ ಮಧುಲಿಕಾ ರಾವತ್ ಕೂಡ ಕೊನೆಯುಸಿರೆಳೆದರು. ಸೇನಾ ಸಿಬ್ಬಂದಿಯ ಮೊದಲ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ದೇಶದ ರಕ್ಷಣೆಗಾಗಿ 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು.

ಅವರು ಮೃತಪಟ್ಟ 9 ತಿಂಗಳ ಬಳಿಕ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ.

Leave a Comment