ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಮತದಾನ ನಡೆಯಲಿದೆ.ಭವಾನಿಪುರ ಸೇರಿದಂತೆ ಶಂಶೇರ್ಗಂಜ್, ಜಂಗೀಪುರ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ದಕ್ಷಿಣ ಕೋಲ್ಕತ್ತ ಭವಾನಿಪುರ, ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಹಿನ್ನೆಲೆ
ಎಲ್ಲರ ಗಮನ ಭವಾನಿಪುರದ ಮೇಲಿದೆ.
ಭವಾನಿಪುರ ಉಪಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ಟಿಬ್ರೂವಾಲ್ ಮತ್ತು ಸಿಪಿಐನ ಶ್ರೀಜೀಬ್ ಬಿವಾಸ್, ಮಮತಾ ಬ್ಯಾನರ್ಜಿ ಅವರೊಂದಿಗೆ ಸೆಣಸಲಿದ್ದಾರೆ.















