ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ (100) ಇಂದು(ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಹೀರಾಬೆನ್ ಅವರನ್ನು ಕೆಲವು ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿ, ತಮ್ಮ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ.. ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಅಂತ ಬರೆದುಕೊಂಡಿದ್ದಾರೆ. ನನ್ನ ತಾಯಿಯ 100 ನೇ ವರ್ಷದ ಹುಟ್ಟುಹಬ್ಬದಂದು ನಾನು ಅವರನ್ನು
ಭೇಟಿಯಾದಾಗ, ಅವರು ಹೇಳಿದ್ದನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ, ಬುದ್ಧಿವಂತಿಕೆಯಿಂದ ಕೆಲಸ ಮಾಡಿ, ಪರಿಶುದ್ಧತೆಯಿಂದ ಜೀವನ ಮಾಡಿ, ಅಂದರೆ ಬುದ್ಧಿವಂತಿಕೆಯಿಂದ ಕೆಲಸ ಮಾಡಿ ಮತ್ತು ಜೀವನವನ್ನು ಪರಿಶುದ್ಧತೆಯಿಂದ ಬದುಕಿರಿ, ಎಂದು ಅವರು ಹೇಳಿದ್ದರು ಅಂತ ಪ್ರಧಾನಿ ಮೋದಿ ಸ್ಮರಿಸಿಕೊಂಡಿದ್ದಾರೆ. ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ, ಅವರನ್ನು ಡಿ.28 ರಂದು ಗುಜರಾತ್‌ನ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶತಾಯುಷಿಯಾಗಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ ದಾಖಲಿಸಲಾಗಿತ್ತು















