Coastal Bulletin

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಜನನಿಬಿಡ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡ ಮತ್ತು ಅವರ ಇಬ್ಬರು ಸಹವರ್ತಿಗಳನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಲ್ಕತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಪಕ್ಷದ ಗೋಪಾಲಪುರ ಗ್ರಾಮ ಪಂಚಾಯತ್ ಸದಸ್ಯ ಸ್ವಪನ್ ಮಾಝಿ ಅವರು ಬೆಳಿಗ್ಗೆ 9 ಗಂಟೆಗೆ ಸಭೆಯಲ್ಲಿ ಹಾಜರಾಗಲು ತೆರಳುತ್ತಿದ್ದಾಗ ಹಂತಕರು ಅವರ ಮೇಲೆ ಮೊದಲು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಚಾಕುಗಳಿಂದ ಇರಿದಿದ್ದಾರೆ. 

ಅಲ್ಲಿಂದ ಪರಾರಿಯಾಗುವ ಸಂದರ್ಭದಲ್ಲಿ ಕೊಲೆಗಾರರು ಮಾಝಿ ಅವರ ಇಬ್ಬರು ಸಹವರ್ತಿಗಳ ಮೇಲೆ ಕೂಡ

ಗುಂಡು ಹಾರಿಸಿ ಕೊಂದಿದ್ದಾರೆ. ಭೂತನಾಥ್ ಪ್ರಾಮಾಣಿಕ್ ಮತ್ತು ಜಂಟು ಹಲ್ದಾರ್ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಮೂವರೂ ಜತೆಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇದು ರಾಜಕೀಯ ದ್ವೇಷಕ್ಕೆ ಸಂಬಂಧಿಸಿದ ಪ್ರಕರಣದಂತೆ ಕಾಣಿಸುತ್ತಿದೆ ಎಂದು ಪ್ರಾಥಮಿಕ ತನಿಖೆಗಳು ಹೇಳಿವೆ.  ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜನರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Leave a Comment