Coastal Bulletin

ನವದೆಹಲಿ : ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆ.ಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಅತ್ಯಂತ ಗಂಭೀರವಾಗಿದೆ. ದೆಹಲಿಯ ಏಮ್ಸ್ ನಲ್ಲಿ ದಾಖಲಿಸಲಾಗಿದೆ.

ಕಿಡ್ನಿ ಸಮಸ್ಯೆ ಸೇರಿದಂತೆ ‌ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಮೆಡಿಸಿನ್ ಓವರ್ ಡೋಸ್ ನಿಂದ ಆರೋಗ್ಯ ಹದಗೆಟ್ಟಿದೆ ಎಂದು ಅವರ ಕಿರಿಯ

ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ.

ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಲಾಲು ಪ್ರಸಾದ್ ಕುಟುಂಬಕ್ಕೆ ಕರೆ ಮಾಡಿ, ಅವರ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ.

Leave a Comment