Coastal Bulletin

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆ ರಾಜ್ಯಗಳಿಂದ ಕರ್ನಾಟಕ ಪ್ರವೇಶ ಮಾಡುವ ಜನರಿಗೆ ಹೆಚ್ಚುವರಿ ನಿರ್ಬಂಧ ವಿಧಿಸಲಾಗಿದೆ.


  • ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ ಬರುವವರು, ಕೋವಿಡ್ 19 ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದಿದ್ದರೂ ಅಥವಾ ಪಡೆಯದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿ ಪಿ ಸಿ ಆರ್ ಪರೀಕ್ಷೆಯ ನೆಗೆಟವ್ ವರದಿಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ.


  • ವಿಮಾನ, ರೈಲು, ರಸ್ತೆ ( ಬಸ್ ಹಾಗೂ ಇತರ ಸ್ವಂತ ವಾಹನಗಳ ಮುಖಾಂತರ) ಮಾರ್ಗದಲ್ಲಿ ಆಗಮಿಸುವ ಪ್ರಯಾಣಿಕರಿಗೆ ನಿಯಮದ ಪಾಲನೆಯು ಕಡ್ಡಾಯವಾಗಿರುತ್ತದೆ. ಹಾಗೂ ಕೇರಳ ಮತ್ತು ಮಹಾರಾಷ್ಟ್ರದಿಂದ ಹೊರಡುವ ಎಲ್ಲಾ ವಿಮಾನಗಳಗೂ ಅನ್ವಯವಾಗುತ್ತದೆ. 


  • 72 ಗಂಟೆಗಳ ಒಳಗೆ ಮಾಡಿಸಿದ, ಆರ್ ಟಿ ಪಿ ಸಿ ಆರ್ ಸೆಲ್ ಟೆಸ್ಟ್ ವರದಿಯನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರವೇ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯವರು ಬೋರ್ಡಿಂಗ್ ಪಾಸ್ ನೀಡುವುದು.


  • ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್ ಟಿ ಪಿ ಸಿ ಆರ್ ನೆಗೆಟಿವ್ ಟೆಸ್ಟ್ ವರದಿ ಖಚಿತಪಡಿಸಿಕೊಳ್ಳುವುದು ರೈಲ್ವೆ ಪ್ರಾಧಿಕಾರದ  ಜವಾಬ್ದಾರಿಯಾಗಿರುತ್ತದೆ.


  • ಬಸ್‌ನ ಮೂಲಕ ಪ್ರಯಾಣಿಸುವವರು ಆರ್ ಟಿ ಪಿ ಸಿ ಆರ್ ನೆಗೆಟಿವ್ ಟೆಸ್ಟ್ ವರದಿ ಖಚಿತಪಡಿಸಿಕೊಳ್ಳುವ ಜವಾಬ್ದಾರಿಯು ಆಯಾ ಬಸ್ ನಿರ್ವಾಹಕರದ್ದಾಗಿದೆ.


  • ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ,ವ್ಯವಹಾರ ಸೇರಿದಂತೆ, ಇತರ ಕಾರಣಗಳಿಗೆ ದಿನಾ ಭೇಟಿ ನೀಡುವವರು ಪ್ರತಿ 15 ದಿನಗಳಗೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ 

    ಮಾಡಿಸಿಕೊಂಡು,ನೆಗೆಟಿವ್ ವರದಿಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ


  • ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು ಮೈಸೂರು ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಮೂಲಕ ರಾಜ್ಯ ಪ್ರವೇಶಿಸುವ ವಾಹನಗಳಿಗೆ (ಚಾಲಕರು ಸಹಾಯಕರು ಪ್ರಯಾಣಿಕರು) ಮೇಲೆ ತಿಳಿಸಿರುವ ನಿಯಮಗಳ ಅನುಪಾಲನೆಗೆ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುವುದು ಹಾಗೂ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ಜವಾಬ್ದಾರಿಯು ಆಯಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ.


  • ಮುಂದುವರಿದು, ಈ ಕೆಳಕಂಡ ಪ್ರಕರಣಗಳಗೆ /ಸಂದರ್ಭಗಳಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ಟೆಸ್ಟ್ ವರದಿ ಹೊಂದುವುದರಿಂದ ವಿನಾಯಿತಿ ನೀಡಲಾಗಿದೆ.

    (i) ಸಾಂವಿಧಾನಿಕ ಕಾರ್ಯಕಾರಿಗಳು ( Constitutional functionaries ) ಮತ್ತು ವೈದ್ಯ/ವೈದ್ಯಕೀಯ ಸಿಬ್ಬಂದಿಗಳು

    (ii) ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು

    (ii) ಕೇರಳದಿಂದ ತುರ್ತು ಸಂದರ್ಭಗಳು ( ಕುಟುಂಬದಲ್ಲಿ ಮರಣ ಸಂಭವಿಸಿದ ಪಕ್ಷದಲ್ಲ ವೈದ್ಯಕೀಯ ಚಿಕಿತ್ಸೆ, ಇತ್ಯಾದಿ) ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಮಾದರಿಗಳನ್ನು ಪರೀಕ್ಷೆಗಾಗಿ ಕರ್ನಾಟಕದಲ್ಲಿಯೇ ಸಂಗ್ರಹಿಸಲಾಗುವುದು, ಸದರಿ ಪ್ರಯಾಣಿಕರ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ, ಇತ್ಯಾದಿ ಪೂರ್ಣ ವಿವರಗಳನ್ನು ಗುರುತಿನ ಚೀಟಿಯ ಆಧಾರದ ಅನ್ವಯ ಪಡೆಯುವುದು, ಆರ್ ಟಿ ಪಿ ಸಿ ಆರ್ ಪರೀಕ್ಷೆಯ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಚಾಲ್ತಿಯಲ್ಲರುವ ಶಿಷ್ಟಾಚಾರದಂತೆ ಕ್ರಮ ಕೈಗೊಳ್ಳುವುದು.

Leave a Comment