ದೆಹಲಿ:ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಮದ್ಯ ಮಾರಾಟ ನಿಷೇದಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಹೈವೇಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳ ಇರುವಂತಿಲ್ಲ,ಸ್ಥಳೀಯ ಆಡಳಿತದ ವ್ಯಾಪ್ತಿಯಲ್ಲಿರುವ ಹಾಗೂ 20,000ಕ್ಕಿಂತ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ನಿಂದ ಈ ಆದೇಶ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ
ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಬಗ್ಗೆ ಆದೇಶವನ್ನು ಕಳುಹಿಸಿದೆ. ಮದ್ಯದಂಗಡಿಗಳಿಗೆ ಪರವಾನಗಿ ನೀಡುವಾಗ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಸೂಚನೆ ನೀಡಿದೆ.
ಹಾಗೆಯೇ ಕುಡಿದು ವಾಹನ ಚಲಾಯಿಸುವವರಿಗೆ ನೀಡಲಾಗುವುದನ್ನು ತಡೆಯಲು ಸೂಕ್ತ ಅಭಿಯಾನಗಳನ್ನು ನಡೆಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.















