ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಹು ನಿರೀಕ್ಷಿತ ಸಚಿವ ಸಂಪುಟದ ಪುನರ್ ರಚನೆ ಆಗಿದ್ದು,ಕರ್ನಾಟಕದ 4 ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದ್ದು 43 ಹೊಸ ಹಾಗೂ ಹಳೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು
ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.ಕರ್ನಾಟಕ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರ ಶೇಖರ್, ಉಡುಪಿ
ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ. ಚಿತ್ರದುರ್ಗದ ಸಂಸದರಾಗಿರುವ ಎ.ನಾರಾಯಣಸ್ವಾಮಿ ಇಂಗ್ಲಿಷ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಬೀದರ್ ಸಂಸದ ಭಗವಂತ ಖೂಬಾ ಈಶ್ವರನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.















