Coastal Bulletin

ಬೆಂಗಳೂರು :ಮಂಗಳಮುಖಿಯರಿಗೆ ರಾಜ್ಯದ ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿಯೂ ಶೇ.1ರಷ್ಟು ಹುದ್ದೆಗಳನ್ನು ಮೀಸಲಿಡುವ ಸಂಬಂಧ ಈಗಾಗಲೇ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ಶುಕ್ರವಾರ ರಾಜ್ಯ ಸರಕಾರ ಹೈಕೋರ್ಟ್​ಗೆ ತಿಳಿಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ವಕೀಲ ವಿಜಯಕುಮಾರ್ ಪಾಟೀಲ್ ಅವರು ಪೀಠಕ್ಕೆ ಮಾಹಿತಿ ನೀಡಿ, ಸರ್ಕಾರದ ಎಲ್ಲ ಹುದ್ದೆಗಳಲ್ಲಿಯೂ ಶೇ.1ರಷ್ಟು ಹುದ್ದೆಗಳನ್ನು ಮಂಗಳಮುಖಿರಿಗೆ ಮೀಸಲಿಡಲು ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆ

ಮಾಡಲಾಗುತ್ತಿದೆ. ಈ ಕುರಿತಂತೆ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ ಎಂದರು

ಕರಡು ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮಗೊಳಿಸಲಾಗುವುದು. ಅದಕ್ಕೆ ಸ್ವಲ್ಪ ಸಮಯ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.  ಮುಂದಿನ ವಿಚಾರಣೆ ವೇಳೆ ಈ ಕುರಿತಂತೆ ಆದ ಬೆಳವಣಿಗೆಗಳ ಮಾಹಿತಿ ನೀಡುವಂತೆ ಸೂಚಿಸಿ ನ್ಯಾಯಾಲಯ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿತು.

Leave a Comment