ಬೆಂಗಳೂರು : ನಿರಂತರ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ *100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್* ಪ್ರತಿಭಟನೆ ನಡೆಸಿತು. ಮಾಜಿ ಸಚಿವರಾದ ಆರ್.ವಿ.
ದೇಶಪಾಂಡೆ, ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು. ಈ ಪ್ರತಿಭಟನೆಯೂ ಇಂದಿನಿಂದ ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ ನಡೆಯಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.















