Coastal Bulletin

ರಾಹುಲ್​ ಗಾಂಧಿ ಜನ್ಮದಿನಕ್ಕೆ ನಟಿ ರಮ್ಯಾ ಶುಭ ಕೋರಿದ್ದು, ಇದೀಗ ಅವರು ಮಾಡಿದ ವಿಶ್ ಎಲ್ಲರ ಗಮನ ಸೆಳೆಯುತ್ತಿದೆ. ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ರಾಹುಲ್​ ಗಾಂಧಿಗೆ ರಮ್ಯಾ ವಿಶ್​ ಮಾಡಿದ್ದಾರೆ. ರಾಹುಲ್​ ಗಾಂಧಿಯ ಒಂದು ಫೋಟೋವನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಅದರ ಜೊತೆ ಅವರು ಬರೆದಿರುವ ವಾಕ್ಯ ಈಗ ಸೋಶಿಯಲ್​ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

‘ಜಗತ್ತನ್ನು ಉತ್ತಮವಾಗಿಸುವ ಅದ್ಭುತ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ರೀತಿ ಬೇರೆ ಯಾರೂ ಇಲ್ಲ’ ಎಂದು ರಮ್ಯಾ ಕ್ಯಾಪ್ಷನ್​ ನೀಡಿದ್ದಾರೆ.ಕೆಲವು ದಿನಗಳ ಹಿಂದೆ ರಮ್ಯಾ ಅವರು ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದರು. ಆಗ ಅವರಿಗೆ ಹಲವು ಬಗೆಯ ಪ್ರಶ್ನೆಗಳು ಎದುರಾಗಿದ್ದರು. ಮದುವೆ, ಸಿನಿಮಾ

ಮತ್ತು ರಾಜಕೀಯದ ಬಗ್ಗೆ ಅಭಿಮಾನಿಗಳು ಪ್ರಶ್ನೆ ಕೇಳಿದ್ದರು. ಚಿತ್ರರಂಗಕ್ಕೆ ಯಾವಾಗ ಮರಳುತ್ತೀರಿ ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ್ದ ರಮ್ಯಾ, ‘ನಿಮ್ಮನ್ನು ನಿರಾಸೆಗೊಳಿಸುತ್ತಿರುವುದಕ್ಕೆ ಕ್ಷಮೆ ಇರಲಿ. ನಾನು ಆಸಕ್ತಿ ಕಳೆದುಕೊಂಡಿದ್ದೇನೆ. ಸಿನಿಮಾ ಮತ್ತು ರಾಜಕೀಯದಲ್ಲಿ ನನ್ನ ಕಾಲ ಯಾವಾಗಲೋ ಮುಗಿಯಿತು’ ಎಂದು ಅವರು ಉತ್ತರಿಸಿದ್ದರು.

Leave a Comment