ಸಿನಿಮಾ ಆಗಲಿದೆ ಖಡಕ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೀವನ ಕಥೆ

Coastal Bulletin
ಸಿನಿಮಾ ಆಗಲಿದೆ ಖಡಕ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೀವನ ಕಥೆ

ಬೆಂಗಳೂರು : ರೋಹಿಣಿ ಸಿಂಧೂರಿಯವರ ಜೀವನ ಕಥೆ ಸಿನಿಮಾ ರೂಪದಲ್ಲಿ ಬರಲಿದೆ!

ಸಾಹಿತಿ ಕೃಷ್ಣ ಸ್ವರ್ಣಸಂದ್ರ ಅವರು ರೋಹಿಣಿ ಸಿಂಧೂರಿ ಅವರ ಜೀವನ ಚರಿತ್ರೆಯನ್ನು ಸಿನಿಮಾ ಮಾಡಲು ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಫಿಲಂಸ್ ಬ್ಯಾನರ್ ಅಡಿ ಕಳೆದ ವರ್ಷ ಜೂನ್ 15 ರಂದು ಭಾರತ ಸಿಂಧೂರಿ ಎಂಬ ಟೈಟಲ್‍ನ್ನು ರಿಜಿಸ್ಟರ್ ಮಾಡಿಸಿದ್ದರು.

ಈ ಸಿನಿಮಾದಲ್ಲಿ ರೋಹಿಣಿ ಸಿಂಧೂರಿ ಅವರು ಆರಂಭದಲ್ಲಿ ಮಂಡ್ಯದ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಮಾಡಿದ್ದ ಕೆಲಸ ಹಾಗೂ ಸಾಧನೆ ಮತ್ತು ಹಾಸನ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಆಗಿದ್ದ ಸಂದರ್ಭಗಳು ಬೆಳೆದು ಬಂದ ಹಾದಿ ಚಿತ್ರಕಥೆಯಲ್ಲಿ ಹೆಣೆಯಲಾಗಿದೆ.ಸದ್ಯ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ನಡೆದ ಬೆಳವಣಿಗೆಗಳನ್ನು  ಸಹ ಚಿತ್ರಕಥೆಯಲ್ಲಿ ಸೇರಿಸಲಾಗಿದೆ.

2020ರಲ್ಲೇ  ಭಾರತ ಸಿಂಧೂರಿ ಹೆಸರಿನಲ್ಲಿ ಸಿನಿಮಾ‌ ರಿಜಿಸ್ಟರ್ ಮಾಡಿಸಲಾಗಿದ್ದು ಕಥೆ, ಚಿತ್ರಕಥೆ, ಸಾಹಿತ್ಯ, ರಚನೆ, ನಿರ್ದೇಶನದ ಜವಾಬ್ದಾರಿಯನ್ನು ಕೃಷ್ಣ ಸ್ವರ್ಣಸಂದ್ರ ಅವರೇ ಹೊತ್ತಿದ್ದಾರೆ. ರೋಹಿಣಿ ಸಿಂದೂರಿ ಪಾತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಅಭಿನಯಿಸಲಿದ್ದಾರೆ. ಇನ್ನೂ ಎರಡು ಮೂರು ತಿಂಗಳಿನಲ್ಲಿ ಈ ಚಿತ್ರ ಸೆಟ್ಟರಲಿದೆ ಎಂದು ಕೃಷ್ಣ ಸ್ವರ್ಣಸಂದ್ರರವರು ತಿಳಿಸಿದ್ದಾರೆ.


Leave a Comment