Coastal Bulletin

ಬೆಂಗಳೂರು :ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ,ಮಾಜಿ ಸಚಿವ ಬಿ.ಜೆಡ್‌. ಜಮೀರ್‌ ಅಹ್ಮದ್ ಅವರ ಮನೆ ಸೇರಿದಂತೆ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ ದಾಳಿ ನಡೆದಿದ್ದು,ಶೋಧ ಕಾರ್ಯ ಮುಂದುವರೆಸಿದ್ದಾರೆ.

ಶಾಸಕ ಜಮೀರ್ ಅಹ್ಮದ್ ಖಾನ್ ಭವ್ಯವಾದ ಬಂಗಲೆ ಸೇರಿದಂತೆ ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ಬೆಳಗ್ಗೆ

6 ಗಂಟೆಗೆ ಐಟಿ ದಾಳಿ ನಡೆದಿದೆ. ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ತೆರಿಗೆ ವಂಚನೆ ಆರೋಪದ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Leave a Comment