ಅಶ್ಲೀಲ ಸಿನಿಮಾಗಳ ನಿರ್ಮಾಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದಾರೆ.
ರಾಜ್ ಕುಂದ್ರಾ ಪೊರ್ನ್ ಚಿತ್ರಗಳನ್ನು ರಚಿಸಿ,ಮೊಬೈಲ್ ಆ್ಯಪ್ ಮೂಲಕ ಪ್ರಕಟಿಸುವ ಹಾಗೂ ಹಂಚಿಕೆ ಮಾಡುತ್ತಿದ್ದರು.ಈ ಕುರಿತು ಕುಂದ್ರಾ ವಿರುದ್ಧ 2021ರ ಫೆಬ್ರವರಿ ತಿಂಗಳಲ್ಲಿ ಮುಂಬೈ ಕ್ರೈಂ ಬ್ರಾಂಚ ನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಅಪರಾಧ ದಳ ಪೊಲೀಸರು ತನಿಖೆ ನಡೆಸಿದ್ದಾರೆ. ಈ ವೇಳೆ ಕುಂದ್ರಾ ವಿರುದ್ಧ ಸಾಕಷ್ಟು ಪುರಾವೆಗಳು ಲಭ್ಯವಾಗಿದೆ.
ಹೀಗಾಗಿ ಕುಂದಾರನ್ನು ಬಂಧಿಸಿದ್ದಾರೆ.'ಪ್ರಕರಣದ ರುವಾರಿ ಅವರೇ ಆಗಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಏನನ್ನೂ ಹೇಳುವುದಿಲ್ಲ’ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಅಶ್ಲೀಲ ಚಿತ್ರಕ್ಕಾಗಿ ರಾಜ್ ಕುಂದ್ರಾ ನಟಿಯನ್ನು ಒತ್ತಾಯಪೂರ್ವಕವಾಗಿ ಬಳಸಿಕೊಳ್ಳುತ್ತಿದ್ದರು ಎಂಬ ಅರೋಪವೂ ಇದೆ.ಕೆಲ ಪೋರ್ನ್ ಚಿತ್ರಗಳನ್ನು ಲೈವ್ ಸ್ಟ್ರೀಮ್ ಮಾಡಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಸಹಿತ 9 ಮಂದಿಯನ್ನು ಬಂಧಿಸಲಾಗಿದೆ.
















