ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭ್ರಮಾಚರಣೆ ವೇಳೆ 11 ಸಾವು; ಕಾಲ್ತುಳಿತಕ್ಕೆ ಕಾರಣಗಳೇನು?

Coastal Bulletin
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭ್ರಮಾಚರಣೆ ವೇಳೆ 11 ಸಾವು; ಕಾಲ್ತುಳಿತಕ್ಕೆ ಕಾರಣಗಳೇನು?

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರು (Bengaluru) ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆದಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.

ಕಾಲ್ತುಳಿತದಲ್ಲಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಾಲಗಿದ್ದ ನಾಲ್ವರು ಆರ್ಸಿಬಿ ಅಭಿಮಾನಿಗಳು ಸೇರಿದಂತೆ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

ಕಾಲ್ತುಳಿತಕ್ಕೆ ಕಾರಣಗಳೇನು?

ರಾಜ್ಯ ಸರ್ಕಾರದ ವತಿಯಿಂದ ಬುಧವಾರ (ಜೂ.04) ಬೆಂಗಳೂರಿನ ವಿಧಾನಸೌಧದಲ್ಲಿ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ ಸಂಭ್ರಮಾಚರಣೆ ಆಯೋಚಿಸಲಾಗಿತ್ತು. ಈ ಕಾರ್ಯಕ್ರಮ ಸಂಬಂಧ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಬಂದಿದ್ದಾರೆ. ಆರ್ಸಿಬಿ ಆಟಗಾರರನ್ನು ಕಣ್ತುಂಬಿಕೊಳ್ಳಲು ವಿಧಾನಸೌಧದ ಎದುರು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಜನರು ಸೇರಿದ್ದರು.

ಮಧ್ಯಾಹ್ನ 3:00 ಗಂಟೆಗೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಗಮಿಸಿದರು. ಸಂಜೆ 4:30 ಸುಮಾರಿಗೆ ವಿಧಾನಸೌಧದಲ್ಲಿ ಆರ್ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ವೀಕ್ಷಿಸಲು ಸಾವಿರಾರು ಮಂದಿ ಆರ್ಸಿಬಿ ಅಭಿಮಾನಿಗಳು ವಿಧಾನಸೌಧದ ಎದುರು

ಸೇರಿದ್ದರ

ಸಂಜೆ 4:35ರ ಸುಮಾರಿಗೆ ಆರ್ಸಿಬಿ ಆಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸನ್ಮಾನಿಸಿದರು. ಈ ವೇಳೆ ಮಳೆ ಬಂದಿದ್ದರಿಂದ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟುಕುಗೊಳಿಸಲಾಯಿತು.

ಇದೇ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಮಂದಿ ಆರ್ಸಿಬಿ ಅಭಿಮಾನಿಗಳು ಸೇರಿದ್ದರು. ಕ್ರೀಡಾಂಗಣದ ಗೇಟ್ ನಂಬರ್ 5 ಮತ್ತು 6 ರ ಮುಖಾಂತರ ಪ್ರವೇಶಕ್ಕೆ ಅವಕಾಶ ನೀಡುವಂತೆ ಅಭಿಮಾನಿಗಳು ಪಟ್ಟು ಹಿಡಿದರು. ನಂತರ, ಗೇಟ್ ನಂಬರ್ 6ರ ಮೇಲೆ ಹತ್ತಿ ಕ್ರೀಡಾಂಗಣದ ಒಳಗೆ ನುಗ್ಗುಲು ಯತ್ನಿಸಿದರು. ಈ ವೇಳೆ ಕೆಳೆಗೆ ಬಿದ್ದು ಓರ್ವ ಯುವಕ ಕಾಲು ಮುರಿದುಕೊಂಡನು.

ಗೇಟ್ ನಂ 18ರ ಬಳಿ ಅಭಿಮಾನಿಗಳಿಂದ ನೂಕುನುಗ್ಗಲು ಸಂಭವಿಸಿತು. ನೂಕುನುಗ್ಗಲಿನಿಂದ ಹಲವರು ಗಂಭೀರವಾಗಿ ಗಾಯಗೊಂಡು. ಪೊಲೀಸರು ಅಭಿಮಾನಿಗಳನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದರು. ಅತ್ತ, ಗೇಟ್ ನಂಬರ್ 12 ರಲ್ಲಿ ಅಭಿಮಾನಿಗಳ ಸಂಖ್ಯೆ ಹೆಚ್ಚಾಯಿತು. ಆಗ, ಕ್ರೀಡಾಂಗಣದ ಸಿಬ್ಬಂದಿ ಗೇಟ್ ತೆರದು ಅಭಿಮಾನಿಗಳನ್ನು ಒಳಗಡೆ ಬಿಡಲು ಆರಂಭಿಸಿದರು. ಏಕಾಏಕಿ ಅಭಿಮಾನಿಗಳು ಬ್ಯಾರಿಕೇಟ್ಗಳನ್ನು ತಳ್ಳಿ ಕ್ರೀಡಾಂಗಣದ ಒಳಗೆ ನುಗ್ಗಲು ಆರಂಭಿಸಿದ್ದರಿಂದ ಕಾಲ್ತುಳಿತ ಸಂಭವಿಸಿತು. ಈ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಕುಸಿದು ಬಿದ್ದರು. ತಕ್ಷಣ ಪೊಲೀಸರು ಮಹಿಳೆಯನ್ನು ಕಾರ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು.

ಈ ಕಾಲ್ತುಳಿತದಲ್ಲಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆ, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದವರಲ್ಲಿ ಆರು ಮಂದಿ ಮತ್ತು ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 12 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಗಳ ಎದುರು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Comment