ಮುಂಬಯಿ : ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕವಾಗಿದ್ದಾರೆ.ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸಭೆಯಲ್ಲಿ ದ್ರಾವಿಡ್ ಅವಿರೋಧವಾಗಿ ಆಯ್ಕೆಯಾಗಿ ಮುಂದಿನ ನ್ಯೂಜಿಲೆಂಡ್ ವಿರುದ್ದದ ಸರಣಿ ವೇಳೆ ತಂಡದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರ ಕಾರ್ಯಾವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ(BCCI) ಅರ್ಜಿ ಅಹ್ವಾನಿಸಿತ್ತು. ಈ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅರ್ಜಿ
ಹಾಕಿದ್ದರು. ಇದೀಗ ದ್ರಾವಿಡ್ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವಿಶ್ವಕಪ್ ಬೆನ್ನಲ್ಲೇ ಟೀಮ್ ಇಂಡಿಯಾ ನವೆಂಬರ್ 17 ರಿಂದ ನ್ಯೂಜಿಲೆಂಡ್ ವಿರುದ್ದ ಸರಣಿ ಆಡಬೇಕಿದ್ದು, ಈ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಕಾರ್ಯಾರಂಭವಾಗಲಿದೆ.














