breaking news

ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ರೆಕೋರ್ಡ್ ಸರಿಗಟ್ಟಿದ ವಿರಾಟ್ ಕೊಹ್ಲಿ- ಹುಟ್ಟು ಹಬ್ಬದಂದು ಕಿಂಗ್ ಕೊಹ್ಲಿ ಹೊಸ ದಾಖಲೆ!

Coastal Bulletin
ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ರೆಕೋರ್ಡ್ ಸರಿಗಟ್ಟಿದ ವಿರಾಟ್ ಕೊಹ್ಲಿ- ಹುಟ್ಟು ಹಬ್ಬದಂದು ಕಿಂಗ್ ಕೊಹ್ಲಿ ಹೊಸ ದಾಖಲೆ!

ಕೋಲ್ಕತಾ: ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ತಮ್ಮ ಹುಟ್ಟುಹಬ್ಬದಂದೇ ಐತಿಹಾಸಿಕ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ 49ನೇ ಏಕದಿನ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ದಶಕಗಳ ಕಾಲ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಅತಿಹೆಚ್ಚು ಏಕದಿನ ಶತಕ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸಚಿನ್ ತೆಂಡುಲ್ಕರ್ 463 ಪಂದ್ಯಗಳ 452 ಇನಿಂಗ್ಸ್‌ಗಳನ್ನಾಡಿ 49 ಏಕದಿನ ಶತಕ ಸಿಡಿಸದರೆ, ಆಧುನಿಕ ಕ್ರಿಕೆಟ್‌ನ ರನ್ ಮಷೀನ್ ವಿರಾಟ್ ಕೊಹ್ಲಿ ಕೇವಲ 289 ಪಂದ್ಯಗಳ 277 ಇನಿಂಗ್ಸ್‌ಗಳನ್ನಷ್ಟೇ ಆಡಿ 49ನೇ ಶತಕ ಸಿಡಿಸುವಲ್ಲಿ ಯಶಸ್ವಿಯಾದರು.

ಈಡನ್‌ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಬರ್ತ್‌ಡೇ ಬಾಯ್ ವಿರಾಟ್ ಕೊಹ್ಲಿ, ಕಗಿಸೋ ರಬಾಡ ಬೌಲಿಂಗ್‌ನಲ್ಲಿ ಆಕರ್ಷಕ ಬೌಂಡರಿ ಬಾರಿಸುವ ಮೂಲಕ ರನ್ ಖಾತೆ ತೆರೆದರು. ಆರಂಭದಿಂದಲೇ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಹುಟ್ಟುಹಬ್ಬದಂದೇ 50+ ರನ್ ಬಾರಿಸಿದ ಭಾರತದ ಆರನೇ ಬ್ಯಾಟರ್ ಎನಿಸಿಕೊಂಡರು.

Leave a Comment