ಅಂಡರ್ 19 ವಿಶ್ವಕಪ್ : ದ.ಆಫ್ರಿಕಾ ವನ್ನು ಮಣಿಸಿ ಫೈನಲ್ ತಲುಪಿದ ಭಾರತ ತಂಡ.

Coastal Bulletin
ಅಂಡರ್ 19 ವಿಶ್ವಕಪ್ : ದ.ಆಫ್ರಿಕಾ ವನ್ನು ಮಣಿಸಿ ಫೈನಲ್ ತಲುಪಿದ ಭಾರತ ತಂಡ.

ದ.ಆಫ್ರಿಕಾ: ನಾಯಕ ಉದಯ್ ಶರಣ್‌ ಹಾಗೂ ಸಚಿನ್‌ ಧಾಸ್‌ ಅವರ ಅದ್ಭುತ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡ 19 ವಯೋಮಿತಿ ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಐದು ಬಾರಿಯ ಚಾಂಪಿಯನ್‌ ಭಾರತ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಅಥವಾ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಬೆನೋನಿಯ ವಿಲೋಮೂರ್ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ 7 ವಿಕೆಟ್‌ಗೆ 244 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತ್ತು. ಪ್ರತಿಯಾಗಿ ಭಾರತ  ತಂಡ 48.5 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 248 ರನ್‌ ಬಾರಿಸುವ ಮೂಲಕ ಸತತ ಐದನೇ ಬಾರಿಗೆ 19 ವಯೋಮಿತಿ ವಿಶ್ವಕಪ್‌ ಟೂರ್ನಿಯ ಫೈನಲ್‌ಗೆ ಲಗ್ಗೆ

ಇಟ್ಟಿತು.ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಅಥವಾ ಆಸ್ಟ್ರೇಲಿಯಾ ತಂಡದ ಜೊತೆ ಸೆಣೆಸಲಿದೆ. ಪಾಕಿಸ್ತಾನ ವಿರುದ್ಧದ ಪಂದ್ಯ ಸಾಂಪ್ರದಾಯಿಕ ಎದುರಾಳಿಯ ವಿರುದ್ಧದ ಫೈನಲ್‌ ಎನ್ನುವ ಕಾರಣಕ್ಕೆ ಕ್ರಿಕೆಟ್‌ ಅಭಿಮಾನಿಗಳನ್ನು ಸೆಳೆಯಲಿದ್ದರೆ, ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ ಪಂದ್ಯ ಸೇಡಿನ ಕಣವಾಗಿ ಮಾರ್ಪಡಲಿದೆ. ಕಳೆದ ವರ್ಷ ಅಹಮದಾಬಾದ್‌ನಲ್ಲಿ ನಡೆದ ಪುರುಷರ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತ್ತು.

ನಾಳೆ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವೆ ಸೆಮಿಫೈನಲ್ ನಡೆಯಲಿದ್ದು, ಭಾನುವಾರ ಫೈನಲ್ ಪಂದ್ಯ ನಡೆಯಲಿದೆ.

Leave a Comment