ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಖ್ಯಾತ ಆಟಗಾರ ಹರ್ಷಲ್ ಪಟೇಲ್ ಸಹೋದರಿ ನಿಧನವಾಗಿದ್ದು, ಇದೀಗ ಪಟೇಲ್ ತಮ್ಮ ಕುಟುಂಬವನ್ನು ಸೇರಲು ಬಯೋ ಬಬಲ್ ತೊರೆದಿದ್ದಾರೆ. ಗೆಲುವಿನ ಖುಷಿಯಲ್ಲಿದ್ದ ಬೆಂಗಳೂರು ತಂಡಕ್ಕೆ ಆಘಾತವಾಗಿದೆ.
ಹರ್ಷಲ್ ಪಟೇಲ್ ಅವರ ಸಹೋದರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿದು
ಬಂದಿದೆ. ಅಂತ್ಯಕ್ರಯೆಯ ಬೆನ್ನಲ್ಲೇ ಹರ್ಷಲ್ ಪಟೇಲ್ ಮತ್ತೆ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.














