Coastal Bulletin

ದುಬೈ: ಇಂದು ನಡೆದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಜಿದ್ದಾ ಜಿದ್ದಿನ ಹೋರಾಟದಲ್ಲಿ ಆಸ್ಟ್ರೇಲಿಯಾ ಸುಲಭ ಜಯ ದಾಖಲಿಸಿ ಮೊದಲ ಬಾರಿಗೆ ಟಿ ಟ್ವೆಂಟಿ ಕಿರೀಟ ತನ್ನದಾಗಿಸಿಕೊಂಡಿತು.

ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ ಸ್ಫೋಟಕ ಬ್ಯಾಟಿಂಗ್‌ನಿಂದ ಹೋರಾಟದಲ್ಲಿ ನ್ಯೂಜಿಲೆಂಡ್ 4 ವಿಕೆಟ್ ನಷ್ಟಕ್ಕೆ 172 ರನ್ ಸಿಡಿಸಿತ್ತು.

ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ವಾರ್ನರ್‌ (53) ಹಾಗೂ ಮಾರ್ಷ್ (77) ರವರ ಭರ್ಜರಿ ಬ್ಯಾಟಿಂಗ್ ನಿಂದ ಗೆಲುವಿನ ನಗೆ ಬೀರಿತು.

Leave a Comment