ಇಂಡೋ- ಆಫ್ರಿಕಾ ಏಕದಿನ ಸರಣಿ 2-1 ಅಂತರದಿಂದ ಸರಣಿ ಗೆದ್ದ ಭಾರತ.

Coastal Bulletin
ಇಂಡೋ- ಆಫ್ರಿಕಾ ಏಕದಿನ ಸರಣಿ 2-1 ಅಂತರದಿಂದ ಸರಣಿ ಗೆದ್ದ ಭಾರತ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಸರಣಿಯ ನಿರ್ಧಾರಕ ಪಂದ್ಯವನ್ನು 78 ರನ್‌ಗಳಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ಭಾರತ ಸರಣಿಯನ್ನೂ ಗೆದ್ದುಕೊಂಡಿದೆ. ಭಾರತದ ಪರ ಬೌಲಿಂಗ್​ನಲ್ಲಿ ಅರ್ಷದೀಪ್ ಸಿಂಗ್ ಮಿಂಚಿದರೆ, ಬ್ಯಾಟಿಂಗ್​ನಲ್ಲಿ ಮಿಂಚಿದ ಸಂಜು ಸ್ಯಾಮ್ಸನ್ ಶತಕಗಳ ಇನ್ನಿಂಗ್ಸ್ ಆಡಿದರು. ಭಾರತ ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ದಾಖಲೆ ಬರೆದಿದೆ.

ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 8 ವಿಕೆಟ್ ಕಳೆದುಕೊಂಡು 296 ರನ್ ಗಳಿಸಿತ್ತು. ಸಂಜು ಸ್ಯಾಮ್ಸನ್ ಭಾರತದ ಪರ ಗರಿಷ್ಠ 108 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು. ಇದಲ್ಲದೇ ತಿಲಕ್ ವರ್ಮಾ 52 ರನ್ ಹಾಗೂ ರಿಂಕು ಸಿಂಗ್ 38 ರನ್ ಗಳ ಇನಿಂಗ್ಸ್ ಆಡಿದರು.

ಇಲ್ಲಿನ ಬೋಲೆಂಡ್‌ ಪಾರ್ಕ್‌ನಲ್ಲಿ ಭಾರತ ತಂಡ ನೀಡಿದ್ದ 297 ರನ್‌ಗಳ ಗುರಿ ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡ ಉತ್ತಮ ಆರಂಭ ಪಡೆದ ಹೊರತಾಗಿಯೂ ಅರ್ಷದೀಪ್‌ ಸಿಂಗ್‌ ಹಾಗೂ ಇತರೆ ಬೌಲರ್‌ಗಳ ಸಂಘಟಿತ ದಾಳಿಗೆ ನಲುಗಿ 45.5 ಓವರ್‌ಗಳಿಗೆ 218 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ ಭಾರಿ ಅಂತರದಲ್ಲಿ ಸೋಲುಂಡಿತು. ಭಾರತದ ಪರ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ಅರ್ಷದೀಪ್ 9 ಓವರ್‌ಗಳಿಗೆ ಕೇವಲ 38 ರನ್‌ ನೀಡಿ 4 ವಿಕೆಟ್‌ ಸಾಧನೆ ಮಾಡಿದರೆ, ವಾಷಿಂಗ್ಟನ್‌ ಸುಂದರ್ ಹಾಗೂ ಆವೇಶ್‌ ಖಾನ್ ತಲಾ ಎರಡೆರಡು ವಿಕೆಟ್‌ಗಳನ್ನು ಕಿತ್ತರು.

Leave a Comment