ಹೈದರಾಬಾದ್ ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ಗೆ 186 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಭಾರತ ತಂಡ 1 ಎಸೆತ ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಭಾರತ ತಂಡ ಸರಣಿಯ ಮೊದಲ ಪಂದ್ಯದಲ್ಲೇ ಸೋತು ಹಿನ್ನಡೆ ಅನುಭವಿಸಿತ್ತು. ಆದರೆ ನಂತರ ಸತತ ಎರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿತು.
ಮಾಜಿ ನಾಯಕ ವಿರಾಟ್ ಕೊಹ್ಲಿ ಸಿಡಿಸಿದ ಅರ್ಧಶತಕದ ನೆರವಿನಿಂದ ಭಾರತ ತಂಡ 6 ವಿಕೆಟ್ ಗಳಿಂದ ಆಸ್ಟ್ರೇಲಿಯಾ ವಿರುದ್ಧ ಜಯಭೇರಿ ಬಾರಿಸುವ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯನ್ನು 2-1ರಿಂದ ವಶಪಡಿಸಿಕೊಂಡಿತು.
ಕಠಿಣ ಗುರಿ ಬೆಂಬತ್ತಿದ ಭಾರತ ಬೇಗನೇ ನಾಯಕ ರೋಹಿತ್ ಶರ್ಮ (17) ಮತ್ತು ಉಪನಾಯಕ ಕೆಎಲ್ ರಾಹುಲ್ (1) ಬೇಗನೇ ನಿರ್ಗಮಿಸಿದರು.
ಆದರೆ ವಿರಾಟ್ ಕೊಹ್ಲಿ ಮತ್ತು
ಸೂರ್ಯಕುಮಾರ್ ಮೂರನೇ ವಿಕೆಟ್ ಗೆ 104 ರನ್ ಜೊತೆಯಾಟದ ಮೂಲಕ ತಂಡವನ್ನು ಆಧರಿಸಿದರು. ವಿರಾಟ್ ಕೊಹ್ಲಿ 48 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 63 ರನ್ ಬಾರಿಸಿ ಇನಿಂಗ್ಸ್ ಕೊನೆಯ ಓವರ್ ನಲ್ಲಿ ಔಟಾದರೆ, ಸೂರ್ಯಕುಮಾರ್ 36 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ 69 ಸಿಡಿಸಿ ಔಟಾದರು.
ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 25 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.














