ಅಹಮ್ಮದಾಬಾದ್ : ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ ಪರ ಅಬ್ಬರಿಸಿದ ಜೋಸ್ ಬಟ್ಲರ್ ಸೆಂಚುರಿ ಮೂಲಕ ರಾಜಸ್ಥಾನ ರಾಯಲ್ಸ್ 7 ವಿಕೆಟ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ. ಒಂದೇ ಆವೃತ್ತಿಯಲ್ಲಿ ನಾಲ್ಕು ಸೆಂಚುರಿ ಸಿಡಿಸಿ ದಾಖಲೆ ಬರೆದ ಬಟ್ಲರ್ ಈ ಮೂಲಕ ಐಪಿಎಲ್ ಟೂರ್ನಿಯಲ್ಲಿ ಒಟ್ಟು 5 ಸೆಂಚುರಿ ಸಿಡಿಸಿದ ಸಾಧನೆ ಮಾಡಿದ್ದಾರೆ. ಐಪಿಎಲ್ 2022 ಟೂರ್ನಿಯಲ್ಲಿ ಫೈನಲ್ ಪ್ರವಶಿಸಿ ಪ್ರಶಸ್ತಿ ಗೆಲ್ಲುವ ಕನಸು ಕಂಡಿದ್ದ ಆರ್‌ಸಿಬಿ ಬಟ್ಲರ್ ಅಬ್ಬರಕ್ಕೆ ಬೆಚ್ಚಿ ಬಿದ್ದಿತು. ಐಪಿಎಲ್ 2022 ಹೋರಾಟವನ್ನೂ ಅಂತ್ಯಗೊಳಿಸಿತು.
2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಪರಿಣಾಮ 157 ರನ್ ಸಿಡಿಸಿತು. ಸುಲಭ ಟಾರ್ಗೆಟ್ ಪಡೆದ ರಾಜಸ್ಥಾನ
ರಾಯಲ್ಸ್ ನಿರಾಯಾಸವಾಗಿ ಚೇಸಿಂಗ್ ಮಾಡಿತು. ಪ್ರಮುಖವಾಗಿ ಜೋಸ್ ಬಟ್ಲರ್ ಬ್ಯಾಟಿಂಗ್ ಆರ್‌ಸಿಬಿ ಐಪಿಎಲ್ ಹೋರಾಟಕ್ಕೆ ಬ್ರೇಕ್ ಹಾಕಿತು.
ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ.













