Coastal Bulletin

ಅಹಮದಾಬಾದ್‌: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಗುಜರಾತ್ ಟೈಟಾನ್ಸ್ ಎದುರು ಚೆನ್ನೈ ಸೂಪರ್‌ ಕಿಂಗ್ಸ್ ತಂಡವು 5 ವಿಕೆಟ್ ರೋಚಕ ಜಯ ಸಾಧಿಸುವ ಮೂಲಕ 5ನೇ ಬಾರಿಗೆ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದೆ.

ಗೆಲ್ಲಲು ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿದ್ದಾಗ, ಮೋಯಿತ್ ಶರ್ಮಾ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ ಒಂದು ಸಿಕ್ಸರ್ ಹಾಗೂ ಒಂದು ಬೌಂಡರಿ ಬಾರಿಸುವ ಮೂಲಕ ಚೆನ್ನೈ ತಂಡಕ್ಕೆ ರೋಚಕ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

Leave a Comment