Coastal Bulletin

ನವದೆಹಲಿ;ಸುರೇಶ್ ರೈನಾ ಇನ್ನು ಮುಂದೆ ಐಪಿಎಲ್ ಸೇರಿದಂತೆ ಎಲ್ಲಾ ರೀತಿಯ ಕ್ರಿಕೆಟ್ ಗೆ ವಿದಾಯ ಹೇಳುವುದಾಗಿ ಟ್ವೀಟ್ ಮಾಡಿದ್ದಾರೆ.

ಐಪಿಎಲ್‌ ಮತ್ತು ಉತ್ತರ ಪ್ರದೇಶಕ್ಕಾಗಿ ದೇಶೀಯ ಕ್ರಿಕೆಟ್‌ನಲ್ಲಿಯೂ ಆಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.ಈ ಕುರಿತು ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದಾರೆ.

ಸುರೇಶ್ ರೈನಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾಗಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಭಾವುಕರಾಗಿ ಟ್ವೀಟ್ ಮಾಡಿರುವ ಅವರು, ‘ದೇಶಕ್ಕಾಗಿ ಮತ್ತು ಉತ್ತರ ಪ್ರದೇಶಕ್ಕಾಗಿ ಕ್ರಿಕೆಟ್

ಆಡುವುದು ನನಗೆ ಹೆಮ್ಮೆಯ ವಿಷಯ.ನಾನು ಈಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ.ಅಲ್ಲದೆ ನಾನು ಬಿಸಿಸಿಐ, ಯುಪಿ ಕ್ರಿಕೆಟ್ ಸಂಸ್ಥೆ,ಐಪಿಎಲ್ ತಂಡ ಸಿಎಸ್‌ಕೆ ಮತ್ತು ರಾಜೀವ್ ಶುಕ್ಲಾ ಅವರಿಗೆ ಧನ್ಯವಾದ ಹೇಳುತ್ತೇನೆ.ನನ್ನನ್ನು ಬೆಂಬಲಿಸಿದ ಅಭಿಮಾನಿಗಳಿಗೂ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ಸುರೇಶ್ ರೈನಾ 2020ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.ಇದೀಗ ಎಲ್ಲಾ ರೀತಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

Leave a Comment