ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಮತ್ತು ಓಮೈಕ್ರಾನ್ ನಿಯಂತ್ರಣಕ್ಕಾಗಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದೆ. ಇಂದಿನಿಂದ ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಯಾಗುತ್ತದೆ ಇಂದು ರಾತ್ರಿ 10 ಗಂಟೆಯಿಂದಲೇ ಬೆಂಗಳೂರು ಸೇರಿದಂತೆ ಕರುನಾಡು ಎರಡು ದಿನ ಬಂದ್ ಆಗಲಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 20 ಸಾವಿರದ ಗಡಿ ದಾಟುತ್ತಿದೆ. ಇದರಲ್ಲಿ ಸಿಂಹಪಾಲು ಬೆಂಗಳೂರು ನಗರದಲ್ಲಿಯೇ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿವೆ. ಕೊರೊನಾ ಏರಿಕೆ ಕಂಡು ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ ಅನ್ನೋ ಪ್ರಶ್ನೆ ಎಲ್ಲರಲ್ಲಿಯೂ ಇದೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ವೀಕೆಂಡ್ ಕರ್ಫ್ಯೂ ಮತ್ತು ಕಠಿಣ ನಿಯಮಗಳು ಈ ತಿಂಗಳು ಮುಂದುವರಿಯುತ್ತವೆ. ಇವತ್ತು ಎರಡನೇಯ ವೀಕೆಂಡ್ ಕರ್ಫ್ಯೂ ಜಾರಿ ಆಗ್ತಿದೆ. ಕೊರೊನಾ ನಿಯಂತ್ರಣ ನಿಯಂತ್ರಿಸಲು ಜನ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮತ್ತೆ ಲಾಕ್ ಡೌನ್ ಅಸ್ತ್ರವನ್ನು ಸರ್ಕಾರ ಬಳಕೆ ಮಾಡುತ್ತಾ ಅನ್ನೋ ಪ್ರಶ್ನೆ ಸಚಿವರು ಉತ್ತರಿಸಿದರು. ಸದ್ಯ ಇರೋ ನಿಯಮಗಳು ಮುಂದುವರಿಯಲ್ಲಿದ್ದು,ಲಾಕ್ ಡೌನ್ ಮಾಡುವ ಕುರಿತು ಇನ್ನು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಕಾರಣ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಶೀಘ್ರವಾಗಿ
ಲಸಿಕೆ ಪಡೆದುಕೊಳ್ಳುವುದು ಉತ್ತಮ ಎಂದರು.
ಸೋಂಕು 5-6 ಪಟ್ಟು ವೇಗವಾಗಿ ಹರಡುತ್ತಿದೆ. ಹೀಗಾಗಿ ಇನ್ನು ಸ್ವಲ್ಪ ದಿನ ಹೋದ್ರೆ ವೀಕೆಂಡ್ ಕರ್ಫ್ಯೂ ರಿಸಲ್ಟ್ ಸಿಗಬಹುದು ರಾಜ್ಯದಲ್ಲಿ ಕೊರೊನಾ ಇನ್ನು ಪೀಕ್ ಗೆ ಹೋಗಿಲ್ಲ ಎಂದು ತಜ್ಞರು ಹೇಳಿದ್ದಾರೆ. ಫೆಬ್ರವರಿ ಮೊದಲ ವಾರ ಪೀಕ್ ಗೆ ಹೋಗುತ್ತೆ. 3- 4ನೇ ವಾರದಿಂದ ಕಡಿಮೆ ಆಗುತ್ತೆ ಎಂದು ತಜ್ಞರು ಹೇಳಿರುವ ಮಾಹಿತಿಯನ್ನು ಹಂಚಿಕೊಂಡರು.
ಈಗ ಭಾರತದಲ್ಲಿ 2,64,202 ಹೊಸ ಕೋವಿಡ್ ಪ್ರಕರಣ ದೃಢವಾಗಿದ್ದು ಕಳೆದ 24 ಗಂಟೆಗಳಲ್ಲಿ 1,09,345 ಸೋಂಕಿತರು. ಚೇತರಿಕೆ ಸಕ್ರಿಯ ಪ್ರಕರಣಗಳು 12,72,073 ಗಳು ದೈನಂದಿನ ಪಾಸಿಟಿವಿಟಿ ದರ: 14.78% ಈವರೆಗೆ ಹೆಚ್ಚಾಗಿದ್ದು, ಒಟ್ಟಾರೆಯಾಗಿ 5,753 ಓಮಿಕ್ರಾನ್ ಪ್ರಕರಣಗಳು ಸಿಕ್ಕಿವೆ.















