ಬೆಂಗಳೂರು: ಕನ್ನಡ ರಾಜ್ಯೋತ್ಸವ 2021 ರ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಜನಸೇವಕ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಜನ ಸ್ಪಂದನ ವೆಬ್ ಪೋರ್ಟಲ್ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಾಗಿದೆ.
ಆಧಾರ್ ಕಾರ್ಡ್, ವಿಧವಾ ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳ 58 ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನ ಸೇವಕ’ ಕಾರ್ಯಕ್ರಮ ಇದಾಗಿದ್ದು, ನಗರದ ಪ್ಯಾಲೇಸ್ ಗುಟ್ಟಹಳ್ಳಿಯ 4
ಮತ್ತು 5ನೇ ಅಡ್ಡರಸ್ತೆಗಳಲ್ಲಿರುವ ಆಯ್ದ 10 ಮನೆಗಳಿಗೆ ಸ್ಥಳೀಯ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಜತೆ ತೆರಳಿದ ಮುಖ್ಯಮಂತ್ರಿಯವರು ವಿವಿಧ ಸೇವೆಗಳನ್ನು ಸಂಬಂಧಪಟ್ಟವರ ಮನೆಯೊಳಗೇ ಹೋಗಿ ತಲುಪಿಸಿದರು.














