ಪ್ರಜ್ವಲ್ ರೇವಣ್ಣ ಕೇಸ್, ಪೆನ್​​ಡ್ರೈವ್ ನೀಡಿದ್ದು ನಾನೇ ಎಂದು ಹೇಳಿಕೆ ಕೊಟ್ಟ ಕಾರ್ತಿಕ್ ಗೌಡ ಎಸ್ಕೇಪ್!

Coastal Bulletin
ಪ್ರಜ್ವಲ್ ರೇವಣ್ಣ ಕೇಸ್, ಪೆನ್​​ಡ್ರೈವ್ ನೀಡಿದ್ದು ನಾನೇ ಎಂದು ಹೇಳಿಕೆ ಕೊಟ್ಟ ಕಾರ್ತಿಕ್ ಗೌಡ ಎಸ್ಕೇಪ್!

ಹಾಸನ, ಮೇ 2: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇಷ್ಟು ದಿನ ಅಶ್ಲೀಲ ವಿಡಿಯೋಗಳ ಬಗ್ಗೆ ಪೊಲೀಸ್ ತನಿಖೆ ಆಯಾಮದಲ್ಲಿ ಮಾತ್ರ ಸುದ್ದಿಯಾಗ್ತಿತ್ತು. ಇದೀಗ ಪೆನ್​ಡ್ರೈವ್ (pen drive) ಅಸಲಿ ಕಹಾನಿ ಶುರುವಾಗಿದೆ. ಪ್ರಜ್ವಲ್​​ ಅಶ್ಲೀಲ ವಿಡಿಯೋ ನೀಡಿದ್ದು ನಾನೇ ಎಂದು ಹೇಳಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್​ ಇದೀಗ ನಾಪತ್ತೆ ಆಗಿದ್ದಾರೆ. ಆ ಮೂಲಕ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿ ಕಾರ್ತಿಕ್, ಪ್ರಜ್ವಲ್ ಬಳಿ ಕಾರು ಚಾಲಕನಾಗಿ 13 ವರ್ಷ ಕೆಲಸ ಮಾಡಿದ್ದರು.​ 2 ದಿನದ ಹಿಂದೆ SIT ಮುಂದೆ ಹಾಜರಾಗೋದಾಗಿ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದರು.

ಪೆನ್​​ಡ್ರೈವ್ ಬಗ್ಗೆ ಹೊಳೆನರಸೀಪುರ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿಕೆ ಬೆನ್ನಲ್ಲೇ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದೇವರಾಜೇಗೌಡ ಹೇಳಿಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಕಾರ್ತಿಕ್, ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಬಿಟ್ಟರೆ ಬೇರೆ ಯಾರಿಗೂ ವಿಡಿಯೋ, ಫೋಟೋಗಳನ್ನು ಹಂಚಿಕೊಂಡಿಲ್ಲ ಎಂದು ಹೇಳಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್​ಗೆ SIT

ನೋಟಿಸ್ ಸಹ ನೀಡಿತ್ತು. ಆದರೆ ಇದೀಗ ಎಸ್ಕೇಪ್ ಆಗಿದ್ದಾರೆ.

ಇನ್ನು ಕಾರ್ತಿಕ್ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾರ್ತಿಕ್ ಮಲೇಷಿಯಾಗೆ ಹೋಗಿದ್ದಾನೆ ಎಂದು ಹೇಳಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಹೆಚ್​ಡಿ ಕುಮಾರಸ್ವಾಮಿ, ಕಾರ್ತಿಕ್​ನನ್ನ ಮಲೆಷ್ಯಾಗೆ ಕಳಿಸಿದ್ಯಾರು ಎಂದು ಪ್ರಶ್ನಿಸಿದ್ದರು.

Leave a Comment