ಬೆಂಗಳೂರು : ಗೌರಿ- ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರಲಿದೆ ಎಂಬುದನ್ನು ಮನಗಂಡ ರೈಲ್ವೆ ಇಲಾಖೆಯು ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲು ಮುಂದಾಗಿದೆ.
ದೇಶದಲ್ಲಿ ಗೌರಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗೋವಾ, ಮುಂಬೈ ನಗರಗಳಲ್ಲಿ ಗಣೇಶ ಹಬ್ಬವನ್ನು ಜಾತ್ರೆಗಿಂತಲೂ ದೊಡ್ಡ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಲಸ ಮಾಡುವ ಸ್ಥಳದಿಂದ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಇಲಾಖೆಯಿಂದ (Indian Railway Special train for Ganesh Chaturthi 2024) ವಿಶೇಷ ರೈಲು ಸೇವೆ ನೀಡಲು ಮುಂದಾಗಿದೆ. ಈ ಮೂಲಕ ಸಾಮಾನ್ಯ ದಿನಗಳಲ್ಲಿ ಸಂಚಾರ
ಮಾಡುವ ರೈಲುಗಳಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತಪ್ಪಿಸಲು ಚಿಂತಿಸಿದೆ.
342 ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 7ರಂದು ಈ ವಿಶೇಷ ರೈಲುಗಳು ಸಂಚಾರ ಆರಂಭಿಸಲಿದೆ.ಮೊದಲ ಹಂತದಲ್ಲಿ ಭಾರತೀಯ ರೈಲ್ವೇ ಮುಂಬೈ ಹಾಗೂ ಕೊಂಕಣ ಮಾರ್ಗದಲ್ಲಿ ಈ 342 ವಿಶೇಷ ರೈಲು ಸಂಚಾರ ನಡೆಸಲಿದೆ. ಇದರ ಜೊತೆಗೆ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಿಂದ ವಿಶೇಷ ರೈಲು ವ್ಯವಸ್ಥೆಯನ್ನೂ ಶೀಘ್ರದಲ್ಲೇ ಘೋಷಿಸಲಿದೆ. ಮುಂಬೈನಿಂದ ಕೊಂಕಣ ಮಾರ್ಗದಲ್ಲಿ 10 ದಿನಗಳ ಕಾಲ ಈ ವಿಶೇಷ ರೈಲುಗಳು ಸಂಚಾರ ನಡೆಸಲಿದೆ.















