Coastal Bulletin

ಬೆಂಗಳೂರು: ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ತಮ್ಮನ್ನು ವಿಶ್ವಾಸಕ್ಕೆ ಪಡೆಯುತ್ತಿಲ್ಲ ಎಂದು ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯನವರ ಮೇಲೆ ಮಾಜಿ ಡಿಸಿಎಂ ಪರಮೇಶ್ವರ್ ಬೇಸರಗೊಂಡಿದ್ದು ರಾಜೀನಾಮೆಗೆ ಮುಂದಾಗಿದ್ದಾರೆ. ಅವರನ್ನು ಸಮಾಧಾನಪಡಿಸಲು ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಧಾವಿಸಿದ್ದಾರೆ. ಈ ನಡುವೆ ಕಾಂಗ್ರೆಸ್​ ಪ್ರಣಾಳಿಕೆ ಸಮಿತಿಗೆ ಪರಮೇಶ್ವರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಇದರೊಂದಿಗೆ ಕರ್ನಾಟಕ ವಿಧಾನಸಭಾ ಚುನಾವಣೆ ಮುನ್ನವೇ ಕಾಂಗ್ರೆಸ್ ನಲ್ಲಿ ಭಾರೀ ಬಂಡಾಯ ಎದುರಾಗಿದೆ.

ತಮ್ಮೊಡನೆ ಚರ್ಚೆ ನಡೆಸದೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಭರವಸೆಗಳನ್ನು ಘೋಷಿಸುತ್ತಿದ್ದಾರೆ.ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು, ಜೊತೆಗೆ ಜಮೀನು ಇಲ್ಲದವರಿಗೆ ಸರ್ಕಾರದಿಂದ ಭೂಮಿ ನೀಡುವ ಘೋಷಣೆ, ರೈತರು, ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಹಲ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಭರವಸೆಗಳ ಘೋಷಣೆ ಮಾಡಲಾಗುತ್ತಿದೆ.ಜಿಲ್ಲಾ ಪ್ರವಾಸದ ವೇಳೆ ತಾವೇ ತೀರ್ಮಾನ ಮಾಡಿ ಉಚಿತ ಘೋಷಣೆಗಳನ್ನು ಮಾಡುತ್ತಿದ್ದಾರೆ ಎಂದು ತಮ್ಮ ಆಪ್ತರ ಬಳಿ ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment