ಕನ್ನಡದ ʼಅಮೃತವರ್ಷಿಣಿʼ ಸಿನಿಮಾ ಖ್ಯಾತಿಯ ನಟ ಶರತ್‌ಬಾಬು ಇಂದು ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಹಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದರು. ಇವರಿಗೆ 72 ವರ್ಷ ವಯಸ್ಸಾಗಿತ್ತು.
ದಕ್ಷಿಣ ಭಾರತ ಸಿನಿಮಾರಂಗದಲ್ಲಿ ಹೆಸರು ಗಳಿಸಿದ್ದ ಇವರು ಕನ್ನಡ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದರು.ಇವರ ಸಾವಿಗೆ ದಕ್ಷಿಣ ಭಾರತ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಅನಾರೋಗ್ಯದ ಕಾರಣದಿಂದ ಏಪ್ರಿಲ್ ಮೊದಲ ವಾರ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಂದ
ಹೈದರಾಬಾದಿಗೆ ಕರೆದೊಯ್ಯಲಾಗಿತ್ತು. ಹಲವು ದಿನಗಳಿಂದ ಶರತ್‌ಬಾಬು ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು.
1973ರಲ್ಲಿ ಸಿನಿಮಾ ರಂಗ ಪ್ರವೇಶಿಸಿದ ಈ ನಟ ತಮಿಳು, ತೆಲುಗು, ಕನ್ನಡ, ಹಿಂದಿ, ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರು 1973ರಲ್ಲಿ ತೆಲುಗಿನ ರಾಮರಾಜ್ಯಂ ಚಿತ್ರ ಮೂಲಕ ಸಿನಿಮಾ ರಂಗಕ್ಕೆ ಕಾಲಿರಿಸಿದ್ದರು.















