ಚಿಕ್ಕಬಳ್ಳಾಪುರ: 6 ವರ್ಷದ ಬಾಲಕಿ ಮೇಲೆ 55 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ (Chikkaballapura Women Police Station) ದೂರು ದಾಖಲಾಗಿದೆ.
ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿಯಾ ಕೊಠಡಿಯಲ್ಲಿ ಘಟನೆ ನಡೆದಿದೆ. ಮಸೀದಿಯೊಂದರ ಮೌಲ್ವಿಯ ತಂದೆ ಬಾಲಕಿಗೆ ಚಾಕೊಲೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಾಲಕಿಯ ತಾಯಿ ದೂರು ನೀಡಿದ ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಸಂಬಂಧ ಆರೋಪಿ ಮಹಪ್ಯೂಸ್ ಬಂಧಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಮೌಲ್ವಿಯ ಆಶ್ರಯಕ್ಕೆ ಜಮಾತ್‌ನಿಂದ ಮಸೀದಿಯ ಕೊಠಡಿ ನೀಡಲಾಗಿತ್ತು. ಆದ್ರೆ ಮಸೀದಿಯ ಕೊಠಡಿಯನ್ನು ದುರುಪಯೋಗ
ಪಡಿಸಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಬಾಲಕಿ ತಾಯಿ ಗಂಭೀರ ಆರೋಪ ಮಾಡಿದ್ದಾರೆ.
ಇನ್ನೂ ಆರೋಪಿ ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶದವನು. 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಂದು ಬೀದಿ ಬದಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಮಸೀದಿ ಬಳಿ ಆಟವಾಡಿಕೊಂಡಿದ್ದ ಬಾಲಕಿಗೆ ಆಮೀಷ ಹೊಡ್ಡಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಮಸೀದಿಯ ಮೌಲ್ವಿ ಸುಹೇಬ್‌ನನ್ನ ಸ್ಥಳಿಯರು ತರಾಟೆಗೆ ತೆಗೆದುಕೊಂಡಿದ್ದು, ಮೌಲ್ವಿ ಆಶ್ರಯಕ್ಕೆ ಕೊಠಡಿ ಪಡೆದು ತಂದೆಗೆ ಯ್ಯಾಕೆ ನೀಡಿದ್ದು? ಅಂತ ಬಾಲಕಿಯ ತಾಯಿ ಆರೋಪಿಗೆ ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.










