ಬೆಂಗಳೂರು: ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್ ಕಾಣಿಸಿಕೊಂಡಿರೋದು ಗಮನಸೆಳೆಯಿತು.
ಕಾರ್ಯಕ್ರಮದಲ್ಲಿ ಗಣ್ಯಾತಿ ಗಣ್ಯರು ಭಾಗಿ
ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೇರಳಂ ಸಿಎಂ ಸತೀಶನ್, ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿರೋದು
ವಿಶೇಷವಾಗಿತ್ತು.
ಜಿ. ಪರಮೇಶ್ವರ್ ರಾಜ್ಯದ ಡಿಸಿಎಂ ಆಗಿ ಡಾ. ಬಿ.ಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಸಂಪುಟ ದರ್ಜೆ ಸಚಿವರಾಗಿ ಕೆ.ಹೆಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ್ರೆ, ಎಂ.ಬಿ ಪಾಟೀಲ್ ಅವರು ವಿಶ್ವಗುರು ಬಸವಣ್ಣ, ಬಸವಾದಿ ಶರಣರು, ಲಿಂಗೈಕ್ಯ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.
ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು
ಪರಮೇಶ್ವರ್ (ಡಿಸಿಎಂ)
ಕೆ.ಹೆಚ್ ಮುನಿಯಪ್ಪ
ಕೆ.ಜೆ ಜಾರ್ಜ್
ಎಂ.ಬಿ ಪಾಟೀಲ್
ರಾಮಲಿಂಗಾ ರೆಡ್ಡಿ
ಸತೀಶ್ ಜಾರಕಿಹೊಳಿ
ಕೃಷ್ಣಭೈರೇಗೌಡ
ಪ್ರಿಯಾಂಕ್ ಖರ್ಗೆ
ಯು.ಟಿ ಖಾದರ್
ಈಶ್ವರ್ ಖಂಡ್ರೆ
ಯತೀಂದ್ರ ಸಿದ್ದರಾಮಯ್ಯ
ಬೈರತಿ ಸುರೇಶ್
ಶರಣ ಪ್ರಕಾಶ್ ಪಾಟೀಲ್















