ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಆ.10ರಂದು ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಮೋದಿ

Coastal Bulletin
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಆ.10ರಂದು ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಆ.10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ (Namma Metro Yellow Line) ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಮೆಟ್ರೋ ಫೇಸ್ 3ಗೂ ಮೋದಿಯವರು ಅಂದೇ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗ ಸುಮಾರು 19.5 ಕಿ.ಮೀ ಇದ್ದು, ಸಂಚಾರ ಮುಕ್ತಕ್ಕೆ ಸಿದ್ಧವಾಗಿದೆ. ಈ ಮಾರ್ಗ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸಲಿದೆ. ಪ್ರತಿದಿನ ಸುಮಾರು 25,000 ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆ ಇದೆ.

ರೈಲುಗಳು 20 ರಿಂದ 30 ನಿಮಿಷಗಳ ಅಂತರದಲ್ಲಿ ಸಂಚರಿಸುವ ಸಾಧ್ಯತೆ ಇದೆ.

ಈ ಮಾರ್ಗದ ಬಗ್ಗೆ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ಸುರಕ್ಷತಾ ತಪಾಸಣೆ ವರದಿ ಸಲ್ಲಿಕೆ ಮಾಡಿದ್ದಾರೆ. ವರದಿಯಲ್ಲಿ ಕೆಲವು ಸಣ್ಣಪುಟ್ಟ ಷರತ್ತುಗಳನ್ನು ವಿಧಿಸಲಾಗಿದೆ. ಅವುಗಳನ್ನು ಕೆಲವೇ ದಿನಗಳಲ್ಲಿ ಸರಿಪಡಿಸುವುದಾಗಿ ಬಿಎಂಆರ್‌ಸಿಎಲ್‌ (BMRCL) ಹೇಳಿದೆ.

Leave a Comment