ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು

Coastal Bulletin
ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು

ಬೆಂಗಳೂರು: 19 ಶಾಸಕರು ಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಸಂಪುಟ ಸಚಿವರಾಗಿ ಇಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್‌ ಅವರ ಪುತ್ರ ಡಾ. ಅಜಯ್‌ ಸಿಂಗ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್‌.ಸಿ.ಬಾಲಕೃಷ್ಣ, ಕೆ.ಎಸ್‌.ಬಸವಂತಪ್ಪ, ಬಸವರಾಜ್‌ ರಾಯರೆಡ್ಡಿ, ಎನ್‌.ಚಲುವರಾಯಸ್ವಾಮಿ, ಲಕ್ಷ್ಮಣ್‌ ಸವದಿ, ಮಧು ಬಂಗಾರಪ್ಪ, ಎಸ್‌.ಎಸ್‌.ಮಲ್ಲಿಕಾರ್ಜುನ್‌, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್‌ ಅರ್ಷದ್‌, ರುದ್ರಪ್ಪ ಲಮಾಣಿ, ಸಂತೋಷ್‌ ಲಾಡ್‌, ಶಿವಲಿಂಗೇಗೌಡ, ಶಿವರಾಜ್‌ ತಂಗಡಗಿ, ವಿಜಯಾನಂದ ಕಾಶಪ್ಪನವರ್‌, ಜಮೀರ್‌ ಅಹ್ಮದ್‌ ಪ್ರತಿಜ್ಞಾವಿಧಿ ಸ್ವೀಕರಿಸಿದರು.

19 ಸಚಿವರು ಪಶ್ಚಿಮಕ್ಕೆ

ಅಭಿಮುಖವಾಗಿ ನಿಂತು ಪ್ರಮಾಣವಚನ ಸ್ವೀಕರಿಸಿದರು. ಈ ಹಿಂದೆ ಡಿಕೆಶಿ ಮತ್ತು 13 ಸಚಿವರು ಪೂರ್ವಕ್ಕೆ ಅಭಿಮುಖವಾಗಿ ನಿಂತು ಪ್ರಮಾಣ ವಚನ ಸ್ವೀಕರಿಸಿದ್ದರು. ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.

ವಿಧಾನಸಭಾ ಸ್ಪೀಕರ್‌ ಸ್ಥಾನಕ್ಕೆ ರೋಣ ಕ್ಷೇತ್ರದ ಜಿ.ಎಸ್.ಪಾಟೀಲ್‌ ಅವರ ಹೆಸರನ್ನು ಘೋಷಿಸಲಾಗಿದೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರನ್ನು ಅಂತಿಮಗೊಳಿಸಲಾಗಿದೆ. ಪರಿಷ್‌ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್‌, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರು ಪ್ರಕಟಿಸಲಾಗಿದೆ.

Leave a Comment