ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಮೂವರ ಬಂಧನ.

Coastal Bulletin
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಮೂವರ ಬಂಧನ.

ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರನ್ನು ಬಂಧಿಸಲಾಗಿದೆ. ಘೋಷಣೆಯ ವಿಚಾರವಾಗಿ ಸರ್ಕಾರ ವಿಡಿಯೋವನ್ನು ಎಫ್ಎಸ್ಎಲ್ ವರದಿಗೆ ಕಳುಹಿಸಲಾಗಿತ್ತು. ಈ ವರದಿಯನ್ನು ಆಧರಿಸಿ ಪೊಲೀಸರಿಂದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಗಲಿಗರು ವಿಜಯೋತ್ಸವದ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಕೆಲವು ನಾಯಕರು ಮಾಧ್ಯಮಗಳ ವರದಿಯನ್ನೇ ಸುಳ್ಳೆಂದು ಜರಿದಿದ್ದರು. ಈ ಹಿನ್ನೆಲೆಯಲ್ಲಿ ಘೋಷಣೆ ಕೂಗಿದ್ದ ವಿಡಿಯೋವನ್ನು ಎಪ್‌ಎಸ್‌ಎಲ್ ವರದಿಗೆ ಕಳುಹಿಸಲಾಗಿತ್ತು. ಆದರೆ, ಈಗ ಎಪ್‌ಎಸ್ಎಲ್ ವರದಿಯನ್ನು ಆಧರಿಸಿ ವಿಧಾನಸೌಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ

ಪ್ರೇರಿತವಾಗಿ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು ಈಗ ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಅರೆಸ್ಟ್ ಮಾಡಿದ್ದಾರೆ. 

ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ಪೊಲೀಸರು ನಂತರ  ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಂದರೆ, ಎಫ್‌ಎಸ್‌ಎಲ್ ವರದಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಸತ್ಯ ಎಂದು ತಿಳಿದುಬರುತ್ತಿದೆ. ಎಲ್ಲ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಲಾಗುತ್ತದೆ. ನಂತರ, ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

Leave a Comment