ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದಲೇ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರಿಗೆ ದೇವರ ದರ್ಶನ ಸಿಗಲಿದೆ.ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲೂ ನಾಳೆಯಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತದೆ.
ಕುಕ್ಕೆಸುಬ್ರಹ್ಮಣ್ಯದಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ಲಭ್ಯವಾಗಿದೆ. ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಯಾವುದೇ
ಸೇವೆಗಳು ಸರಕಾರದ ಮುಂದಿನ ಆದೇಶದ ತನಕ ನಡೆಯುವುದಿಲ್ಲ. ಮಂಗಳಾರತಿ ಸೇವೆ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.















