Coastal Bulletin

ಉಡುಪಿ: ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ ಅಂತ ಸುಪ್ರೀಂಕೋರ್ಟ್ ಹೇಳಿದೆ. ಜಾರಕಿಹೊಳಿ ಪ್ರಕರಣದಲ್ಲಿ ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನೋ ಭಾವನೆ ಬರುತ್ತದೆ ಎಂದು ಹೇಳುವ ಮೂಲಕ ಸಚಿವ ಜೆ.ಸಿ ಮಾಧುಸ್ವಾಮಿ ರಮೇಶ್ ಜಾರಕಿಹೊಳಿ ಪರ ಬೆಂಬಲಕ್ಕೆ ನಿಂತಿದ್ದಾರೆ.

ಉಡುಪಿಯ 2000 ಎಕ್ರೆ ಜಮೀನು ಪುನರುಜ್ಜೀವನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭ ಅವರು ಮಾಧ್ಯಮದ ಜೊತೆ ಮಾತನಾಡಿದರು.ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಿಳಿದ ಸಾಮಾನ್ಯ ಜ್ಞಾನದ ಪ್ರಕಾರ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಅನಿಸುತ್ತದೆ. ಜಾರಕಿಹೊಳಿ ಅವರಿಗೆ ಸರ್ಕಾರ ಮತ್ತು ಪಕ್ಷದ ಕಡೆಯಿಂದ ಏನೂ  ತೊಂದರೆ ಮಾಡಿಲ್ಲ. ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಅಷ್ಟೇ ಎಂದು

ಹೇಳಿದರು.

ಇನ್ನು ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ. ಇದೊಂದು ಕಾನೂನಾತ್ಮಕ ಮತ್ತು ನೈತಿಕ ವಿಚಾರ. ನೈತಿಕವಾಗಿ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿಯೂ ಯಾವುದೇ ಸಮಸ್ಯೆ ಇದೆ ಅನಿಸಲ್ಲ. ಎಲ್ಲವನ್ನು ಎದುರಿಸಲೇಬೇಕು., ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಯಾರನ್ನು ದೂರಲು ಸಾಧ್ಯವಿಲ್ಲ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಮಾಧುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

Leave a Comment