ನಂಜನಗೂಡು ದೇವಸ್ಥಾನದ ಉತ್ಸವಮೂರ್ತಿ ಅಪವಿತ್ರಗೊಳಿಸಿದ ಅಪರಾಧಿಗಳನ್ನು ಬಂಧಿಸದ ಪೊಲೀಸರ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ.

Coastal Bulletin
ನಂಜನಗೂಡು ದೇವಸ್ಥಾನದ ಉತ್ಸವಮೂರ್ತಿ ಅಪವಿತ್ರಗೊಳಿಸಿದ ಅಪರಾಧಿಗಳನ್ನು ಬಂಧಿಸದ ಪೊಲೀಸರ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ.

ಮೈಸೂರು : ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ `ಅಂಧಕಾಸುರನ ಸಂಹಾರ’ ಧಾರ್ಮಿಕ ಕಾರ್ಯಕ್ರಮ ನಡೆಯುವಾಗ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದು, ಆರೋಪಿಗಳ ಬಂಧಿಸುವಂತೆ ಆಗ್ರಹಿಸಿ ಗುರುವಾರ ನಂಜನಗೂಡುವಿನಲ್ಲಿ ನಡೆಸಲಾಗುತ್ತಿದ್ದು, ಬಂದ್'ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಯಿಂದ ಬಂದ್ ಯಶಸ್ವಿಯಾಗಿತ್ತು. ಮೆಡಿಕಲ್ ಅಂಗಡಿಗಳ ಹೊರತುಪಡಿಸಿ ಎಲ್ಲಾ ವ್ಯಾಪಾರಗಳನ್ನು ಬಂದ್ ಮಾಡಿ, ಬಂದ್'ಗೆ ಜನರು ಉತ್ತಮ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.ಆದರೆ ಉತ್ಸವ ನಡೆಯುವ ಸಂದರ್ಭದಲ್ಲಿ ಉತ್ಸವ ಮೂರ್ತಿಗೆ ಎಂಜಲು ನೀರು ಚೆಲ್ಲಿ ಅಪವಿತ್ರಗೊಳಿಸಿದವರು ಇನ್ನೂ ಬಂಧನವಾಗಿಲ್ಲ ಇದಕ್ಕೆ ಪೊಲೀಸರ ದಿವ್ಯ ನಿರ್ಲಕ್ಷ್ಯವೇ ಕಾರಣ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಷಾಸುರ ವಧೆ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಆವರಣದಲ್ಲಿ ಸಂಪ್ರದಾಯದಂತೆ ಪಟ್ಟಣದ ರಾಕ್ಷಸ ಮಂಟಪದಲ್ಲಿ ಮಹಿಷಾಸುರ ಬೃಹತ್ ರಂಗೋಲಿ ಬರೆದು, ಬೃಹದಾಕಾರದ ಬ್ಯಾನರ್ ಕಟ್ಟಲಾಗಿತ್ತು.

ಪದ್ಧತಿಯಂತೆ ನಂಜುಂಡೇಶ್ವರನ ಉತ್ಸವ ಮೂರ್ತಿಯನ್ನು ಹೊತ್ತವರು ಮಹಿಷಾಸುರನ ರಂಗೂಲಿಯ ಸುತ್ತ ಮೂರು ಸುತ್ತು ಸುತ್ತುಗಳನ್ನು ಹಾಕಿ ರಂಗೋಲಿಯನ್ನು ಅಳಿಸಿ, ಬ್ಯಾನರನ್ನು ಕಿತ್ತೆಸೆದು ತೇರಿನ ಬೀದಿಗಳಲ್ಲಿ ಮುಂದಕ್ಕೆ ಸಾಗಬೇಕು. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡ ಬಂದ ವಾಡಿಕೆಯಾಗಿತ್ತು.

ಮಹಿಷಾಸುರ ಸಂಹಾರಕ್ಕೆ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. ಮಹಿಷಾಸುರನನ್ನು ರಾಜನೆಂದು

ಪೂಜಿಸುತ್ತೇವೆ. ಈ ಆಚರಣೆ ನಿಲ್ಲಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಭಕ್ತರು, ತಲಾತಲಾಂತರಗಳಿಂದ ಆಚರಣೆ ಮಾಡಿಕೊಂಡು ಬಂದಿದ್ದೇವೆ ಎಂದು ವಿವರಿಸಿದ್ದರು. ಆದರೂ ಮೆರವಣಿಗೆ ಬಂದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ನೀರನ್ನು ಉತ್ಸವ ಮೂರ್ತಿ ಮೇಲೆ ಎರಚಿದ್ದರು.

ನಂಜನಗೂಡು ಅಂಧಕಾಸುರ ಆಚರಣೆಗೆ ಅಡ್ಡಿಪಡಿಸಿದ ವಿಚಾರದ ಕುರಿತು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಅವರು, ಬಾಲರಾಜು, ನಾರಾಯಣ, ನಾಗಭೂಷಣ್, ನಟೇಶ್ ಹಾಗೂ ಅಭಿ ಈ ಐವರ ಮೇಲೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಹಾಗೂ ಪ್ರಕರಣ ಕೂಡ ದಾಖಲಾಗಿದೆ.

Leave a Comment