ಬೆಂಗಳೂರು: ಹಿಜಾಬ್ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ಇದು ಭಾರಿ ವಿವಾದಕ್ಕೀಡಾಗಿದ್ದು, ನಾಯಕರ ನಡುವೆ ಹಗ್ಗಾಜಗ್ಗಾಟಕ್ಕೆ ಕಾರಣವಾಗಿದೆ.
ಇದೀಗ ಇದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸೂತ್ತೋಲೆ ಹೊರಡಿಸಿದೆ.
ಸರ್ಕಾರದ ಎಲ್ಲ
ಶಾಲಾ ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಖಾಸಗಿ ಶಾಲೆಗಳು, ಕಾಲೇಜುಗಳಿಗೂ ತಮ್ಮ ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.














