Coastal Bulletin

ಮಂಡ್ಯ :ಮದುವೆಯಾದರೆ ಬೇರೆಯಾಗುತ್ತೇವೆ ಎಂದು ಅವಳಿ ಜವಳಿ ಸಹೋದರಿಯರಿಬ್ಬರು ನೇಣಿಗೆ ಕೊರಳೊಡ್ಡಿದ ಹೃದಯವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.ಹುಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿ ಪುತ್ರಿಯರಾದ ದೀಪಿಕಾ ಮತ್ತು ದಿವ್ಯ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಸಹೋದರಿಯರಾಗಿದ್ದಾರೆ.

ಇಬ್ಬರು ಅವಳಿ ಸಹೋದರಿಯರು ಚಿಕ್ಕಂದಿನಿಂದ ಬಹಳ ಅನ್ಯೋನ್ಯತೆಯಿಂದ ಇದ್ದು

ಇಬ್ಬರೂ ಹೆಣ್ಣು ಮಕ್ಕಳು ದೊಡ್ಡವರಾಗಿದ್ದಾರೆ. ಆದ್ದರಿಂದ ಮದುವೆ ಮಾಡಿಬಿಡೋಣ ಎಂದು ಪೋಷಕರು ನಿರ್ಧರಿಸಿದ್ದರು. ಅದರಂತೆಯೇ, ಇಬ್ಬರನ್ನೂ ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ, ಬೇರೆ ಬೇರೆ ಮನೆಗಳನ್ನು ಸೇರಿದರೆ ತಮ್ಮ ಬಾಂಧವ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಚಿಂತಿಸಿದ

ಸಹೋದರಿಯರು ಸಂಜೆ ವೇಳೆಗೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಇಷ್ಟು ವರ್ಷ ಜೀವಕ್ಕೆ ಜೀವವಾಗಿದ್ದ ಈ ಅವಳಿ ಜವಳಿ ಸಹೋದರಿಯರು ಬೇರೆ ಬೇರೆ ಮನೆಗೆ ಹೋಗುವುದನ್ನು ಊಹಿಸಲೂ ಸಾದ್ಯವಾಗದೆ ಸಾವಿನಲ್ಲಿ ಒಂದಾಗುವ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಲಾಗುತ್ತಿದೆ.ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment