ಬೆಂಗಳೂರು :2020- 2021ನೇ ಸಾಲಿನ ದ್ವಿತೀಯ ಪಿಯುಸಿ ಪುನರಾವರ್ತಿತ (ರಿಪೀಟರ್ಸ್) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಸರ್ಕಾರ ಹೈಕೋರ್ಟ್ ಗೆ ಹೇಳಿದೆ.ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಈ ಮಾಹಿತಿ ನೀಡಿದ್ದು ನೀಡಿದ್ದು, ಈ ಬಾರಿ ದ್ವಿತೀಯ ಪಿಯುಸಿ ರಿಪೀರ್ಟ್ ಗಳಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ಪ್ರತೀ ರಿಪೀಟರ್ ವಿದ್ಯಾರ್ಥಿಗೆ 35 ಕನಿಷ್ಠ ಅಂಕದ ಜೊತೆಗೆ 5 ಗ್ರೇಸ್ ಮಾರ್ಕ್ಸ್ ನೀಡಲಾಗುವುದು. ಒಟ್ಟು 40 ಅಂಕ ಕೊಟ್ಟು ಪಿಯು ರಿಪೀಟರ್ಸ್ ಪ್ರೊಮೋಟ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.ಪ್ರಸಕ್ತ ಸಾಲಿನಲ್ಲಿ 76 ಸಾವಿರ ಪುನರಾವರ್ತಿತ ಅಭ್ಯರ್ಥಿಗಳು ಇದ್ದಾರೆ ಎನ್ನಲಾಗಿದೆ.
ಕೊರೋನಾ ಕಾರಣ, ದ್ವಿತೀಯ ಪರೀಕ್ಷೆ ಇಲ್ಲದೆ ಫ್ರೆಶರ್ಸ್ ವಿದ್ಯಾರ್ಥಿಗಳನ್ನ
ಪಾಸ್ ಮಾಡಲಾಗಿತ್ತು. ಹತ್ತನೇ ತರಗತಿ ಹಾಗೂ ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಫ್ರೆಶರ್ಸ್ ಗಳ ಪಾಸ್ ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಆದ್ರೆ ಇದನ್ನ ಪ್ರಶ್ನಿಸಿ ರಿಪೀಟರ್ಸ್ ಸಹ ಕೋರ್ಟ್ ಮೆಟ್ಟಿಲೇರಿದ್ರು. ಕೋರ್ಟ್ ಯಾವ ವಿದ್ಯಾರ್ಥಿಗಳಿಗೂ ಅನ್ಯಾಯವಾಗದಂತೆ ಫಲಿತಾಂಶ ನೀಡುವಂತೆ ಸರ್ಕಾರಕ್ಕೆ ಹೇಳಿತ್ತು.















