ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಈ ಬಾರಿಯ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಕೇವಲ ಮೂರು ದಿನಗಳ ಕಾಲ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ ಎಂದರು.
ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೊರತುಪಡಿಸಿ ಉಳಿದೆಡೆ ಕೋವಿಡ್ ನಿಯಮ ಪಾಲನೆಯೊಂದಿಗೆ
ಸರಳವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಅನುಮತಿ ನೀಡಿದ್ದಾರೆ.
ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಭೀತಿಯಿಂದ ಸಾರ್ವಜನಿಕ ಗಣೇಶೋತ್ಸವವನ್ನು ಮೂರು ದಿನಕ್ಕೆ ಸೀಮಿತಮಾಡಲಾಗಿದ್ದು, ಯಾವುದೇ ಮೆರವಣಿಗೆ, ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಜಿಲ್ಲಾಡಳಿತ, ಬಿಬಿಎಂ ಸೂಚಿಸಿದ ಸ್ಥಳಗಳಲ್ಲಿಯೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಸ್ಪಷ್ಟಪಡಿಸಿದರು.















