ಪ್ರವೀಣ್ ನೇಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಕೋರ್ಟ್.

Coastal Bulletin
ಪ್ರವೀಣ್ ನೇಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಕೋರ್ಟ್.

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್‌ ಆದೇಶಿಸಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕೆ.ಇಸ್ಮಾಯಿಲ್‌ ಶಫಿ, ಕೆ.ಮೊಹಮ್ಮದ್‌ ಇಕ್ಬಾಲ್‌ ಮತ್ತು ಎಂ.ಶಾಹೀದ್‌ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿಗಳಾದ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ ಮತ್ತು ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ.

ಮೇಲ್ಮನವಿದಾರ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸುವ ಬಗ್ಗೆ ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು

ಹಾಜರಲಿಲ್ಲ. ಆದರೆ, ಪ್ರವೀಣ್‌ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸುವ ಪಿತೂರಿ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದ್ದರು. ಪಿತೂರಿ ರೂಪಿಸಲು ಯಾವುದೇ ಬಹಿರಂಗ ಕ್ರಿಯೆಯನ್ನು ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

Leave a Comment