ಗದಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲವಧಿಯಲ್ಲಿಯೇ 4 ಸಾವಿರ ವಕ್ಫ್ ಖಾತೆ ಬದಲಾಗಿವೆ. ಈಗಹೋರಾಟ ಮಾಡುತ್ತಿರುವವರು ಆಗ ಎಲ್ಲಿ ಹೋಗಿದ್ದರು? ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಂತರಿಕ ಕಚ್ಚಾಟದಲ್ಲಿ ಮೇಲುಗೈ ಸಾಧಿಸಲು ನಡೆಸುತ್ತಿರುವ ಹೋರಾಟ ಇದಾಗಿದೆ. ವಕ್ಫ್ ಬಗ್ಗೆ ಮಾತನಾಡುತ್ತಾ ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು
ಜನರನ್ನು ಯಾಮಾರಿಸಲು ಮಾಡುತ್ತಿರುವ ಹೋರಾಟವಾಗಿದೆ. ಕಾಂಗ್ರೆಸ್ ಸರ್ಕಾರದ ಮೇಲೆ ರಾಜ್ಯದ ಜನತೆ ತೋರುತ್ತಿರುವ ಪ್ರೀತಿ ಅಭಿಮಾನ ಸಹಿಸಲಾಗದೇ ಸುಳ್ಳು ಸುದ್ದಿ ಹಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.